ಕೃಷ್ಣರಾಜನಗರ: ಹಂಪಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಮ್ಯಾ ಅಧ್ಯಕ್ಷರಾಗಿ ಮಹಾದೇವರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹದೇವ ಮಾತನಾಡಿ, ಮುಂದಿನ ದಿನಗಳಲ್ಲಿ ಗ್ರಾಮವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಿ ರೈತರಿಗೆ ಎಲ್ಲಾ ರೀತಿಯ ಸಹಕಾರಗಳನ್ನು ನೀಡಿ ಹಂಪಾಪುರ ಗ್ರಾಮ ಪಂಚಾಯತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದೊಡ್ಡ ಸ್ವಾಮಿಗೌಡ ಹಾಗೂ ಶಾಸಕ ಡಿ ರವಿಶಂಕರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.