ಹುಣಸೂರು: ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಯಾಗುವ ಮೂಲಕ ಆಕೆಗೆ ಸಾಮಾಜಿಕ ನ್ಯಾಯ ಸಿಗಲಿ ಎಂದು ತಾಲೂಕು ಡಾ.ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ ದೊಡ್ಡಹೆಜ್ಜೂರು ನಾಗೇಶ್ ಸರಕಾರವನ್ನು ಆಗ್ರಹಿಸಿದ್ದಾರೆ. ನಾಡಿನ ಪುಣ್ಯ ಕ್ಷೇತ್ರದವಾದ ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣ ಜೀವಂತ ಇರುವುದರಿಂದ ಆ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದು ನ್ಯಾಯ ಸಿಗಬೇಕಾದರೆ ಪ್ರಾಮಾಣಿಕ ನೈಜ ತನಿಖೆಯಾಗ ಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.