ಮ್ಯಾಟ್ರಿಮೋನಿ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಬಳಿಕ ಮದುವೆಯಾಗುವುದಾಗಿ ಹೇಳಿ ಅವರಿಂದ ಹಣ ಪಡೆದು ವಂಚಿಸುತ್ತಿದ್ದ ಮತ್ತು ಆತನಿಗೆ ಸಹಕಾರ ನೀಡುತ್ತಿದ್ದ ಆರೋಪದಲ್ಲಿ ಮಂಗಳೂರಿನ ಕಾವೂರು ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಸುಶಾಂತ್ ಪೂಜಾರಿ ಯಾನೆ ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ. ಕಕೇರಾ (32) ಮತ್ತು ಭಾಸ್ಕರ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿತ್ತು. ಅಲ್ಲದೇ ನಂಬಿಸಿ ಹಂತ ಹಂತವಾಗಿ 6,60,000 ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ನೊಂದ ಮಹಿಳೆಯು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ಪತ್ತೆ ಹಚ್ಚಿ ಬಂಧಿಸಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಿಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿದ್ದ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದ. ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ್ದಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ನಂತರ ಈ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ. ಸದ್ರಿ ಆರೋಪಿತನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿದೆ.
ವರದಿ: ಶಂಶೀರ್ ಬುಡೋಳಿ



