Saturday, February 14, 2026
Google search engine

Homeಅಪರಾಧಕಾರಲ್ಲಿ ಎಂಡಿಎಂಎ ಮಾರಾಟ: ಮೂವರು ಅರೆಸ್ಟ್

ಕಾರಲ್ಲಿ ಎಂಡಿಎಂಎ ಮಾರಾಟ: ಮೂವರು ಅರೆಸ್ಟ್

ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಬೆಂಗಳೂರು ನಗರ ದಿಂದ ಖರೀದಿಸಿ ಅದನ್ನು ಕಾರಲ್ಲಿ ಮಂಗಳೂರಿನ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಸ್ತಿಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ (34), ಕೋಡಿ, ಡಿ ರೋಡ್ ನಿವಾಸಿ ಮೈಯದ್ದಿ, ಮುಕಚೇರಿ ನಿವಾಸಿ ಶಿಫಾನ್(28) ಎಂದು ಗುರುತಿಸಲಾಗಿದೆ.
ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ
ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ 11,90,000 ಮೌಲ್ಯದ 118.13 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ನಾಲ್ಕು ಮೊಬೈಲ್, ಬೂದು ಬಣ್ಣದ ಸ್ಚಿಪ್ಟ್ ಕಾರು ಸಹಿತ ಒಟ್ಟು 17,95,000 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

  • ಶಂಶೀರ್ ಬುಡೋಳಿ
RELATED ARTICLES
- Advertisment -
Google search engine

Most Popular