ಬೆಂಗಳೂರು : ರಾಜ್ಯದಲ್ಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದು, ಅಸಿಸ್ಟೆಂಟ್ ಮ್ಯಾನೇಜರ್‌ನಿಂದಲೇ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಆನ್‌ಲೈನ್ ಜೂಜಿನ ಚಟದಿಂದ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಇಂಡಿಯನ್ ಬ್ಯಾಂಕ್‌ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕಳ್ಳತನ ಮಾಡಿದ್ದಾನೆ.
ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.



