Sunday, April 20, 2025
Google search engine

Homeಅಪರಾಧಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಹೊಡೆದಾಟ: 7 ಮಂದಿಗೆ ಗಾಯ

ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಹೊಡೆದಾಟ: 7 ಮಂದಿಗೆ ಗಾಯ

ಗದಗ: ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮೈನುದ್ದಿನ್, ಇರ್ಫಾನ್, ಶಾಬುದ್ದೀನ್,ಸಬೀರ್,ನೌಶಾದ್, ಸುಲೇಮಾನ ಹಾಗೂ ಅಬ್ದುಲ್ ಸತ್ತಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾರಕಾಸ್ತ್ರಗಳಿಂದ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಣ್ಣಪುಟ್ಟ ಗಾಯಗಳಾಗಿರುವವರಿಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular