ಬೆಂಗಳೂರು : ಮಾಜಿ ಸಚಿವ ಹಾಗೂ ಕೈಗಾರಿಕೋದ್ಯಮಿ ಮುರುಗೇಶ್ ಆರ್.ನಿರಾಣಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದ್ದು, ಇದೇ ತಿಂಗಳ 24ರಂದು ವಿಶ್ವವಿದ್ಯಾಲಯದ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11ಕ್ಕೆ ಜರುಗಲಿರುವ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ರಾಜಕಾರಣಿ ಹಾಗೂ ಉದ್ಯಮಿಯಾಗಿರುವ ನಿರಾಣಿಯವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುವುದು ಎಂದು ವಿವಿಯ ಉಪ ಕುಲಪತಿ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



