Thursday, February 19, 2026
Google search engine

Homeಅಪರಾಧಸಿಗರೇಟ್ ಸೇದಿ ಅಸಭ್ಯ ವರ್ತನೆ ಆರೋಪ: ಯುವಕ ಅರೆಸ್ಟ್

ಸಿಗರೇಟ್ ಸೇದಿ ಅಸಭ್ಯ ವರ್ತನೆ ಆರೋಪ: ಯುವಕ ಅರೆಸ್ಟ್

ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ.
ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಯುವಕನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಮುಹಮ್ಮದ್ ಮೋಹಾದ್ ಎಸ್, ಬಂಧಿತ ಯುವಕ. ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್‌ ಸೇದಿರುವುದೆಂದು ತಿಳಿದು ಬಂದಿದೆ. ನಂತರ ಈ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular