ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ದಕ್ಕೆಯಲ್ಲಿ ನಡೆದಿದೆ.
ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಮುರುಗನ್ (35) ಎಂದು ಗುರುತಿಸಲಾಗಿದೆ.
ಇಂದು ದಕ್ಕೆಯಲ್ಲಿ ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಏಕಾಏಕಿ ಬುಡದಿಂದಲೇ ಮುರಿದುಬಿದ್ದಿದೆ. ಈ ವೇಳೆ ಅದು ಮುರುಗನ್ ಅವರ ಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.



