ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು.
ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಹೇಳಿದರು.
ಇಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ “ಮೆಗಾ ಮ್ಯಾರಾಥಾನ್ -2026” ಜಾಗೃತಿಗಾಗಿ, ಶಕ್ತಿಗಾಗಿ, ನಶೆ ಮುಕ್ತ ಮಂಡ್ಯಕ್ಕಾಗಿ ಕಾರ್ಯಕ್ರಮಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡ್ರಗ್ಸ್ ಎಂಬ ಮಾದಕವಸ್ತು ವಿಶ್ವದ ಪ್ರತಿಯೊಂದು ದೇಶದ ಯುವಜನತೆಯ ಮೇಲೆ ಪರಿಣಾಮ ಬೀರುತ್ತಿದ್ದು
ಡ್ರಗ್ಸ್ ಗಳು ವ್ಯಸನಿಗಳ ಮನಸ್ಸು ಮತ್ತು ದೇಹದ ಜೀವಕೋಶಗಳ ಮೇಲೆ ದುಷ್ಟ ಪರಿಣಾಮಗಳನ್ನು ಬೀರುತ್ತಿದೆ ಯುವಜನತೆಯು ಕ್ಷಣಿಕ ಸುಖಕ್ಕೆ ತಮ್ಮ ಸುಖಜೀವನವನ್ನು ಕಳೆದುಕೊಳ್ಳಬೇಡಿ ಮತ್ತು ಯುವ ಜನತೆಯು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳನ್ನು ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಮನಸ್ಸು ವ್ಯಸನದಿಂದ ಮುಕ್ತವಾದರೆ ಮಾತ್ರ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ. ದೈಹಿಕವಾಗಿ ಸದೃಢವಾಗಿದ್ದರೆ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ. ಸಾಮಾಜಿಕ ಮತ್ತು ನಾಗರೀಕ ರಕ್ಷಣೆಯ ಕೆಲಸವನ್ನು ಪೊಲೀಸ್ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಶೋಭಾರಾಣಿ ವಿ. ಜೆ ರವರು ಮಾತನಾಡಿ ನಶೆ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಮೆಗಾ ಮ್ಯಾರಾಥಾನ್ -2026″ ಜಾಗೃತಿಗಾಗಿ, ಶಕ್ತಿಗಾಗಿ, ನಶೆ ಮುಕ್ತ ಮಂಡ್ಯಕ್ಕಾಗಿ ಮ್ಯಾರಥಾನ್ ಓಟ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಸತ್ಯ ಸಾಯಿ ಶಾಲಾ ಮಕ್ಕಳು ಹಾಗೂ ಎಲ್ಲ ಕಡೆಯಿಂದಲೂ ಭಾಗವಹಿಸಿದ್ದಾರೆ. ಕಾರ್ಯಕ್ರಮ ಯಶಸ್ವಿಯಾಗಿದೆ. ಎಲ್ಲರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾಸ್ಯ ನಟರಾದ ನಟರಾಜ್ ( ಗಿಲ್ಲಿ ನಟ ) ರವರು ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ದುಶ್ಚಟಗಳಿಂದ ದೂರವಿರಬೇಕು. ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



