ಮೈಸೂರು : ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಭಾನುವಾರ ‘ಸೇಫ್ ಮೈಸೂರು ವ್ಯಾರಥಾನ್’ ಯಶಸ್ವಿಯಾಗಿ ನಡೆಯಿತು. 5 ಮತ್ತು 10 ಕಿ.ಮೀ. ಓಟ ಆಯೋಜಿಸಲಾಗಿತ್ತು. ಓಟಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ವ್ಯಸನ ಮುಕ್ತ ಹಾಗೂ ಸೈಬರ್‌ಕ್ರೈಂ ಮುಕ್ತ ನಗರ ನಿರ್ಮಾಣ ಮಾಡುವ ಸಲುವಾಗಿ ಮ್ಯಾರಥಾನ್ ಆಯೋಜಿಸಿರುವುದು ಸ್ವಾಗತಾರ್ಹ. ಯುವಜನರು ಮಾದಕ ವಸ್ತುಗಳಿಂದ ದೂರ ಇರಬೇಕು. ಮಾದಕ ವಸ್ತುಗಳು ಯುವಜನರಿಗೆ ದೊರೆಯದಂತೆ ಪೊಲೀಸರು ಎಚ್ಚರ ವಹಿಸಬೇಕು ಎಂದರು.
ಮುಂದುವರೆದು, ಸೈಬರ್ ಅಪರಾಧದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆಯಿದ್ದು, ಜನರಲ್ಲಿ ಜಾಗೃತಿ ಮೂಡಿದರೆ ಸೈಬರ್ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶ್ರಮಿಸಬೇಕು ಎಂದು ಹೇಳಿದರು.
ನಂತರ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ವಾದಕಸ್ತುಗಳಿಂದ ಯುವ ಜನರನ್ನು ರಕ್ಷಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಡ್ರಗ್ಸ್ ಹಾವಳಿ ತಡೆಗಟ್ಟಲು ಪೊಲೀಸರು ಟೊಂಕಕಟ್ಟಿ ನಿಂತಿರುವುದು ಶ್ಲಾಘನೀಯ ಎಂದರು.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ, ವಾದಕ ವಸ್ತು ಸೇವನೆಯಿಂದ ಆಗುವ ಅಪಾಯ ಹಾಗೂ ಸೈಬರ್ ಅಪರಾಧದ ಬಗ್ಗೆ ಜಾಗೃತಿ ಮೂಡಿಸಲು ಮ್ಯಾರಥಾನ್ ಆಯೋಜಿಸಲಾಗಿದೆ ಇದರಿಂದ ಯುವಜನರು ಆರೋಗ್ಯ ಕಾಪಾಡಿಕೊಂಡು ಸದೃಢರಾಗಬೇಕು ಎಂದು ಕರೆ ನೀಡಿದರು.
ಮುಂಜಾನೆಯ ಚುಮುಚುಮು ಚಳಿಯನ್ನೂ ಲೆಕ್ಕಿಸದೆ ಅರಮನೆ ಆವರಣಕ್ಕೆ ಬಂದು ಸೇರಿದ ಸಾವಿರಾರು ಯುವಕ, ಯುವತಿಯರು ಓಟಕ್ಕೆ ಮೆರಗು ನೀಡಿದರು. ಮ್ಯಾರಥಾನ್‌ನಲ್ಲಿ ನೂರಾರು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ಸಂದರ್ಭ ಶಾಸಕ ಟಿ.ಎಸ್.ಶ್ರೀವತ್ಸ, ಐಜಿಪಿ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿ.ಪಂ. ಸಿಇಒ ಯುಕೇಶ್ ಕುವಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಟರಾದ ವಿನಯ್ ರಾಜ್‌ಕುವಾರ್, ಅಮೃತಾ ಅಯ್ಯಂಗಾರ್, ಬೃಂದಾ ಆಚಾರ್ ಹಾಗೂ ಇತರರು ಪಾಲ್ಗೊಂಡಿದ್ದರು.



