Monday, March 2, 2026
Google search engine

Homeರಾಜ್ಯಗುರುಪುರ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ಸಿಪಿಐಎಂ ನಿಂದ ಪಾದಯಾತ್ರೆ

ಗುರುಪುರ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ ಸಿಪಿಐಎಂ ನಿಂದ ಪಾದಯಾತ್ರೆ

ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ‌ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಗುರುಪುರ ವಲಯ ಸಮಿತಿ ನೇತೃತ್ವದಲ್ಲಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದವರಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು.
ಸಿಪಿಐಎಂ ದಕ್ಷಿಣ ಕನ್ನಡ‌ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪಾದಯಾತ್ರೆಯ ಸಮಾರೋಪ ಭಾಷಣ ಮಾಡಿದರು. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕ್ಷೇತ್ರವನ್ನು ಪೂರ್ಣವಾಗಿ ಕಡೆಗಣಿಸಲಾಗಿದೆ. ಬಹುತೇಕ ಹೋಬಳಿ ಕೇಂದ್ರಗಳಲ್ಲಿ ಸಮುದಾಯ ಆಸ್ಪತ್ರೆಗಳನ್ನು ತೆರೆಯಲು ಇಲ್ಲಿಯವರಗೆ ಸಾಧ್ಯ ಆಗಿಲ್ಲ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ವೈದ್ಯರು, ದಾದಿಯರು ಸಹಿತ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಹೊಸದಾಗಿ ಸ್ಥಾಪನೆಗೊಂಡಿರುವ ನಾಲಕ್ಕು ತಾಲೂಕುಗಳಲ್ಲಿ ಇಲ್ಲಿಯವರಗೆ ತಾಲೂಕು ಆಸ್ಪತ್ರೆಗಳ ನಿರ್ಮಾಣ ಆಗಿಲ್ಲ ಎಂಬುದು ಗ್ರಾಮೀಣ ಭಾಗಗಳ ಆರೋಗ್ಯ ಕ್ಷೇತ್ರದ ಗಂಭೀರ ಸ್ಥಿತಿಯನ್ನು‌ ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದರು

RELATED ARTICLES
- Advertisment -
Google search engine

Most Popular