Monday, March 2, 2026
Google search engine

Homeಅಪರಾಧಬ್ರಹ್ಮರಕೂಟ್ಲು ಟೋಲ್ ವಿರುದ್ಧ ಧರಣಿ ಸತ್ಯಾಗ್ರಹ: ಜಿಲ್ಲಾ ಟೋಲ್ ವಿರೋಧಿ ಹೋರಾಟ ಸಮಿತಿ ಬೆಂಬಲ

ಬ್ರಹ್ಮರಕೂಟ್ಲು ಟೋಲ್ ವಿರುದ್ಧ ಧರಣಿ ಸತ್ಯಾಗ್ರಹ: ಜಿಲ್ಲಾ ಟೋಲ್ ವಿರೋಧಿ ಹೋರಾಟ ಸಮಿತಿ ಬೆಂಬಲ

ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈಯವರ ನೇತ್ರತ್ವದಲ್ಲಿ ಮಂಗಳವಾರ ಟೋಲ್ ಗೇಟ್ ಬಳಿ ನಡೆಯಲಿರುವ ಧರಣಿ ಸತ್ಯಾಗ್ರಹಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಹೋರಾಟ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಸಮಿತಿಯ ಸಂಚಾಲಕರಾದ ಸುಹೇಲ್ ಕಂದಕ್ ತಿಳಿಸಿದ್ದಾರೆ ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಟೋಲ್ ಗೇಟ್ ತೆರವುಗಾಗಿ ಮಾಡುವ ಜನಪರವಾದ ಹೋರಾಟದಲ್ಲಿ ನಾವು ಭಾಗಿಯಾಗುತ್ತೇವೆ ಮತ್ತು ಟೋಲ್ ತೆರವು ಮಾಡುವವರೆಗೆ ಹೋರಾಟ ಮುಂದುವರೆಸುತ್ತೇವೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವೈಜ್ಞಾನಿಕ ಮತ್ತು ಕಾನೂನುಬಾಹಿರ ರೀತಿಯಲ್ಲಿ ಟೋಲ್ ನಿರ್ಮಿಸಿ ಕಳೆದ ಹದಿಮೂರು ವರ್ಷಗಳಿಂದ ಕಾರ್ಯಚರಣೆ ಮಾಡುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದರು.
ಟೋಲ್ ಗೇಟ್ ನಲ್ಲಿ ಕುಡಿಯುವ ನೀರು ಸಹಿತ ಯಾವುದೇ ಮೂಲಭೂತವಾದ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಳ್ಳದೆ ಹಣವಸೂಲಿ ಕೇಂದ್ರದ ಮಾದರಿಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರುಗಳಾದ ಅನ್ವರ್ ಸಾದತ್ ಬಜತ್ತೂರು, ನ್ಯಾಯವಾದಿ ಉಮೇಶ್ ಗೌಡ, ಧನುರಾಜ್, ಹೋರಾಟ ಸಮಿತಿ ಸದಸ್ಯರಾದ ಹನೀಫ್ ಖಾನ್ ಕೊಡಾಜೆ,ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular