Wednesday, March 4, 2026
Google search engine

Homeಅಪರಾಧಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಕಲಂ: 121(1), 132,262 BNS ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ @ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ ಮೋಹನ್ ಬಾಬು ರವರು ಆರೋಪಿಗೆ,
ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ಕಲಂ 132 ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ಕಲಂ262 ರಲ್ಲಿ ಕಾನೂನುಬದ್ಧವಾಗಿ ವಶಕ್ಕೆಪಡೆಯುವ ಸಂದರ್ಭದಲ್ಲಿ ತಡೆಯುಂಟು ಮಾಡಿದ್ದಕ್ಕಾಗಿ ೦1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ‌ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕುಮಾರಿ ಪ್ರೀತಿ ಎಂ.ಸಿ ರವರು ಸಮರ್ಥವಾಗಿ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular