Thursday, March 5, 2026
Google search engine

Homeರಾಜ್ಯಸುದ್ದಿಜಾಲಹಾಸನದಲ್ಲಿ ಲೋಕಾಯುಕ್ತ ದಾಳಿ: ಬಾಗಿಲು ತೆರೆಯದೇ AEE ಕಳ್ಳಾಟ

ಹಾಸನದಲ್ಲಿ ಲೋಕಾಯುಕ್ತ ದಾಳಿ: ಬಾಗಿಲು ತೆರೆಯದೇ AEE ಕಳ್ಳಾಟ

ಹಾಸನ : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದೆ.

ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ ಎನ್ನಲಾಗಿದ್ದು, ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.

ಇಷ್ಟಲ್ಲದೆ ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆದಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ‌. ಸತ್ಯನಾರಾಯಣ ಫೋನ್ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ.

ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದಾರೆ.

RELATED ARTICLES
- Advertisment -
Google search engine

Most Popular