ಮಂಗಳೂರಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅ.ಕ್ರ.56/2026 ಕಲಂ. 8(c),20(b) (ii) A, 22(C)) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಕೇಸ್ ದಾಖಲಾಗಿದ್ದು ಬಂಧಿತರನ್ನು ಮೊಹಮ್ಮದ್ ಸಯ್ಯದ್ ಆಫ್ರಿದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಷಾನ್ ಹಾಗೂ
ಫೆಲಿಕ್ಸ್.ಪಿ.ಜೊಸೆಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ
53.87 ಗ್ರಾಂ MDMA, 103. 20 ಗ್ರಾಂ
ಹೈಡ್ರೋವಿಡ್ ಗಾಂಜಾ ಮತ್ತು MG Hector ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ 04-03-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರಿಯಾ ರಸ್ತೆಯ Classic Comfort Lodge ನಲ್ಲಿ ರೂಮ್ ಮಾಡಿ ಕುಳಿತು ನಿಷೇಧಿತ ಮಾದಕ ದ್ರವ್ಯ MDMA ಮತ್ತು ಹೈಡ್ರೋ ವೀಡ್ ಗಾಂಜಾವನ್ನು ಮಂಗಳೂರು ನಗರದ ಕಾಲೇಜ್ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ 4 ಆರೋಪಿತರನ್ನು ಬಂಧಿಸಲಾಗಿದೆ.
ಮತ್ತೊಂದು ಪ್ರಕರಣವು ಮಂಗಳೂರು ಉತ್ತರ ಪೊಲೀಸ್ ಠಾಣಾ ಅ.ಕ್ರ.29/2026 ಕಲಂ. 8(c),20(B), (ii) (B), ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಕೇಸ್ ದಾಖಲಾಗಿತ್ತು. ಈ ಕೇಸ್ ನಲ್ಲಿ
ಎಡಲ್ ರೋಚ್ ಹಾಗೂ ಆರೋನ್ ವಿಶಾಲ್ ಲಾಸ್ರಾದೋ ಎಂಬಿಬ್ಬರನ್ನು ಬಂಧಿಸಲಾಗಿದ್ದು ಇವರಿಂದ
60 ಗ್ರಾಂ ಹೈಡ್ರೋವಿಡ್ ಗಾಂಜಾ, 1 ಕೆಜಿ155 ಗ್ರಾಂ
ಗಾಂಜಾ, ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ 04-03-2026 ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರೀನ್ ಪಾರ್ಕ್ ಮೈದಾನ ಬಂದರ್ ಬಳಿಯಲ್ಲಿ ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ವೀಡ್ ಗಾಂಜಾ ಮತ್ತು ಗಾಂಜಾವನ್ನು ಮಂಗಳೂರು ನಗರದ ಕಾಲೇಜ್ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ 2 ಆರೋಪಿತರನ್ನು ಬಂಧಿಸಲಾಗಿದೆ.
ಮುಂಬೈ ನಿವಾಸಿಯಾದ ಸಂದೀಪ್ ಶೆಟ್ಟಿ ದುಬೈನಲ್ಲಿ ಹೋಟೆಲ್ ಒಂದರಲ್ಲಿ ಮ್ಯಾನೇಜರ್ ಆಗಿದ್ದು, ನಿಷೇಧಿತ ಮಾದಕ ವಸ್ತುವಾದ ಹೈಡ್ರೋ ವೀಡ್ ಗಾಂಜಾವನ್ನು ಬೆಂಗಳೂರಿಗೆ ವಿಮಾನದ ಮುಖಾಂತರ ಸಾಗಾಟ ಮಾಡುತ್ತಿದ್ದ. ಬೆಂಗಳೂರು ವಿಮಾನ ನಿಲ್ದಾಣದಿಂದ ಸಾಗಾಟ ಮಾಡಲು ಎಡಲ್ ರೋಚ್ ರವರನ್ನು ನೇಮಕಮಾಡಿಕೊಂಡಿದ್ದ. ಎಡಲ್ ರೋಚ್ ನು ವಿಮಾನ ನಿಲ್ದಾಣದಿಂದ ಹೈಡ್ರೋ ವೀಡ್ ಗಾಂಜಾವನ್ನು ಸಂದೀಪ್ ಶೆಟ್ಟಿ ಹೇಳಿದ ಸ್ಥಳಕ್ಕೆ ಸಾಗಿಸುವ ವ್ಯವಸ್ಥೆ ಮಾಡುತ್ತಿದ್ದ. ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಮಕ್ಸೂದ್ ಸಾಗ್ ನ ಮೂಲಕ ಮೊಹಮ್ಮದ್ ಸಯ್ಯದ್ ಆಫ್ರೀದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ರವರಿಗೆ ಬೆಂಗಳೂರಿನಲ್ಲಿ ಮಾದಕ ವಸ್ತುವನ್ನು ಪೂರೈಸಿದ್ದಾರೆ. ಮೊಹಮ್ಮದ್ ಸಯ್ಯದ್ ಆಫ್ರೀದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಬೆಂಗಳೂರಿನಿಂದ ಗಾಂಜಾ, ಹೈಡ್ರೋವಿಡ್ ಮತ್ತು ಎಂ.ಡಿ.ಎಂ.ಎ ನ್ನು ತಮ್ಮ ಎಂ.ಜಿ ಹೆಕ್ಟರ್ ವಾಹನದಲ್ಲಿ ತೆಗೆದುಕೊಂಡು ಬಂದಿರುವುದಾಗಿದೆ. ಆರೋಪಿತರಾದ ಮೊಹಮ್ಮದ್ ಸಯ್ಯದ್ ಆಫ್ರೀದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಷಾನ್ ಹಾಗೂ ಫೆಲಿಕ್ಸ್.ಪಿ.ಜೊಸೆಫ್ ರವರು ಮಂಗಳೂರು ನಗರದ Classic Comfort Lodge ನಲ್ಲಿ ರೂಮ್ ಪಡೆದು ಮಾದಕ ವಸ್ತುವನ್ನು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿರುವಾಗ ಆರೋಪಿತರನ್ನು ಪತ್ತೆ ಮಾಡಿ ಬಂಧಿಸಲಾಗಿದೆ.
ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ರವರು ಗ್ರೀನ್ ಪಾರ್ಕ್ ಮೈದಾನ ಬಂದರ್ ಬಳಿಯಲ್ಲಿ Maruti Swift ಕಾರಿನಲ್ಲಿ ಕುಳಿತು ಮಾದಕ ವಸ್ತುವನ್ನು ಯುವಕ, ಯುವತಿಯರಿಗೆ ಮಾರಾಟ ಮಾಡುತ್ತಿರುವಾಗ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.



