Friday, March 6, 2026
Google search engine

Homeಅಪರಾಧ2022 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

2022 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

2022 ರಲ್ಲಿ ಮುಲ್ಕಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕೋರ್ಟ್ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿ ಮಹತ್ವದ ಆದೇಶ ನೀಡಿದೆ. 19-03-2022 ರ ರಾತ್ರಿ ಸುಮಾರು 9-45ಕ್ಕೆ ಬಪ್ಪನಾಡು ಗ್ರಾಮದ ಮೂಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿ ಉಲ್ಲಂಜೆ ಎಂಬಲ್ಲಿಯ ಹರೀಶ್ ಸಾಲ್ಯಾನ್ (47) ಎಂಬಾತನನ್ನು ಹಣಕಾಸಿನ ದ್ವೇಷದಿಂದ ಆರೋಪಿ ಮುರುಗನ್ ಎಂಬಾತ ಹರೀಶ್ ಸಾಲ್ಯಾನ್ ನ ಮುಖಕ್ಕೆ ಸಿಮೆಂಟ್ ಕಾಂಕ್ರಿಟ್ ಸಹಿತ ಇರುವ ಕೆಂಪು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈ ಕುರಿತು ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಪಿಐ ಕುಸುಮಧರ್ ನಡೆಸಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಎ ಎಸ್ ಐ ಸಂಜೀವ್ ತನಿಖಾ ಸಮಯ ಸಹಕರಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾದ ಜಗದೀಶ್ ವಿ.ಎನ್. ಅವರು ಆರೋಪಿ ಮುರುಗನ್ ಎಂಬಾತನಿಗೆ ಕಲಂ 302 ಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರ PP ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular