ಬೆಂಗಳೂರು : ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು, ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದರು.
ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದು, ಬಳಿಕ ದಾಖಲೆಯ 17ನೇ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು.
ಇನ್ನೂ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಪ್ರಗತಿಶೀಲ ರಾಜ್ಯದ ತೆರಿಗೆ ಹಣಕ್ಕೆ ಪ್ರಮುಖ ದೃಷ್ಟಿಯಾದ ನಾನು ಸರ್ವರ ಏಳಿಗೆ ಬಯಸಿ ಆಯವ್ಯಯ ಬಜೆಟ್ ಮಂಡಿಸುತ್ತಿದ್ದೇನೆ. 6 ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.
ಅಲ್ಲದೆ, ರೈತರ ದಮನಿತರ ಕಾರ್ಮಿಕರ ಮಹಿಳೆಯರ ಅಶಕ್ತರ ಅಲ್ಪಸಂಖ್ಯಾತರ ವ್ಯಾಪಾರ ಮತ್ತು ಕೈಗಾರಿಕೋದ್ಯಮಿಗಳಿಗೆ ಒದಗಿಕೊಂಡರುವ ಕನಸು ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ ಜೀವಂತ ದಾಖಲೆಯಾಗಿದೆ ಎಂದು ತಿಳಿಸಿದರು.



