Tuesday, April 8, 2025
Google search engine

Homeರಾಜ್ಯಸುದ್ದಿಜಾಲಏ.9 ತಿರುಮಲೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಜಾತ್ರಾ/ಬ್ರಹ್ಮರಥೋತ್ಸವ : ಶಿವಾನಂದ ಮೂರ್ತಿ

ಏ.9 ತಿರುಮಲೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಜಾತ್ರಾ/ಬ್ರಹ್ಮರಥೋತ್ಸವ : ಶಿವಾನಂದ ಮೂರ್ತಿ

ರಾಮನಗರ: ಮಾಗಡಿ ಟೌನಿನ ತಿರುಮಲೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ೨೦೨೪ನೇ ಸಾಲಿನ ಜಾತ್ರಾ/ಬ್ರಹ್ಮರಥೋತ್ಸವವು ಏಪ್ರಿಲ್ ೯ ರಿಂದ ಪ್ರಾರಂಭವಾಗಿ ಮೇ ೮ರ ವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾತ್ರಾ ಸಂದರ್ಭದಲ್ಲಿ ವಿದ್ಯುತ್‌ನಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಜಾತ್ರಾ/ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು ಹಾಗೂ ರಾಸುಗಳಿಗೆ ಚಿಕಿತ್ಸೆ ನೀಡಲು ಪಶುಪಾಲನಾ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು ಎಂದು ತಿಳಿಸಿದರು.

ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದರು. ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular