Monday, April 21, 2025
Google search engine

Homeಅಪರಾಧಐಎಎಸ್ ಕನಸು ನನಸಾಗದ್ದಕ್ಕೆ ನೇಣಿಗೆ ಶರಣಾದ ಬ್ಯಾಂಕ್ ಮ್ಯಾನೇಜರ್

ಐಎಎಸ್ ಕನಸು ನನಸಾಗದ್ದಕ್ಕೆ ನೇಣಿಗೆ ಶರಣಾದ ಬ್ಯಾಂಕ್ ಮ್ಯಾನೇಜರ್

ಮಂಡ್ಯ: ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ವಿನಾಯಕ ನಗರದಲ್ಲಿ ನಡೆದಿದೆ.

ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಶೃತಿ, ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದಕ್ಕೂ ಮುನ್ನ ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು  ಡೆತ್ ನೋಟ್  ಬರೆದಿಟ್ಟಿದ್ದಾರೆ. ತಂದೆ ಮಲ್ಲಪ್ಪರಿಗೆ ಕರೆ ಮಾಡಿ ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು‌ ಮನವಿ ಮಾಡಿದ್ದಾರೆ.

ಗ್ರಾಮಾಂತರ  ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular