Monday, April 21, 2025
Google search engine

Homeಸ್ಥಳೀಯಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ ಅವರು  ಮಾವುತರಿಗೆ ಉಪಹಾರ ಬಡಿಸಿದರು.

ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು.

ಮಾವುತರು ಹಾಗೂ ಕವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.

ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ನರಸಿಂಹ ರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಬಿ ರಮೇಶ್, ಅರಣ್ಯಾಧಿಕಾರಿ ಸೌರಭ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular