ಗುಜರಾತ್: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ೧೦ ಮಂದಿ ಸಾವನಪ್ಪಿದ ಘಟನೆ ಗುಜರಾತ್‌ನ ಅಹಮದಾಬಾದ್ ಬಳಿ ನಡೆದಿದೆ.
ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್ ಕಡೆಗೆ ಹೊರಟಿದ್ದ ಕಾರು ನದಿಯಾಡ್ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಾಂಕರ್‌ನ ಹಿಂಬದಿಗೆ ಹೋಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಒಟ್ಟು ೧೦ ಜನರ ಪೈಕಿ ೮ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನುಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ ಎಂದು ಖೇಡಾ ಜಿಲ್ಲಾ ಎಸ್ಪಿ ರಾಜೇಶ್ ಗಾಧ್ವಿ ತಿಳಿಸಿದ್ದಾರೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಶವಗಳನ್ನಸ್ಥಳೀಯರ ಸಹಕಾರದಿಂದ ಜಿಲ್ಲಾಡಳಿತದ ಅಧಿಕಾರಿಗಳು ಹೊರ ತೆಗೆದಿದ್ದಾರೆ.