ಮಂಡ್ಯ: ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿಯಾಗಿ ಇಬ್ಬರ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂ-ಮೈ ಹೆದ್ದಾರಿಯಲ್ಲಿ ರಸ್ತೆ ವಿಭಜಕ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ.
ಬೆಂಗಳೂರಿನ ಬಗಲಕುಂಟೆ ನಿವಾಸಿಗಳಾದ ಕಲಾ( 40), ಪುತ್ರ ದರ್ಶನ್ (21) ಮೃತಪಟ್ಟವರು.
ಕಾರಿನ ಹಿಂಬದಿಯಲ್ಲಿದ್ದ ಪುತ್ರಿ ಮೇಘನ ಹಾಗೂ ಅಳಿಯ ಮಂಜುನಾಥ್ ಗಾಯಗೊಂಡಿದ್ದಾರೆ.
ಗಾಯಾಳುಗನ್ನ ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮಿಮ್ಸ್ ಶವಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.