Monday, April 7, 2025
Google search engine

Homeಅಪರಾಧಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕಾಮುಕನಿಗೆ 20 ವರ್ಷ ಕಠಿಣ ಸಜೆ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕಾಮುಕನಿಗೆ 20 ವರ್ಷ ಕಠಿಣ ಸಜೆ

ಚಾಮರಾಜನಗರ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕನಿಗೆ ನಗರದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.              

ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ (21) ಶಿಕ್ಷೆಗೊಳದವನಾಗಿದ್ದು, 15 ವರ್ಷದ ಬಾಲಕಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುವ ಸಮಯದಲ್ಲಿ ಮೈ ಕೈ ಮುಟ್ಟಿ, ಅಸಭ್ಯವಾಗಿ ನಡೆದುಕೊಂಡಿದ್ದ ಈ ವೇಳೆ ಆಕೆ ವಿರೋಧ ವ್ಯಕ್ತಪಡಿಸಿದರು ಕೂಡ ಲೆಕ್ಕಿಸದೆ ಲೈಂಗಿಕ ದೌರ್ಜನ್ಯ ಎಸೆಗಿದ್ದ.                         

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣದ ದಾಖಲಾಗಿತ್ತು. ತನಿಖೆ  ನಡೆಸಿದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ. ಮಂಜು  ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಶಾರಾಣಿ ಅವರು ರಂಗಸ್ವಾಮಿ 20 ವರ್ಷ ಕಠಿಣ ಶಿಕ್ಷೆ,  40,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.                      

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದ ಬಾಲಕಿಗೆ 30 ದಿನಗಳ ಒಳಗಾಗಿ 4 ಲಕ್ಷ ರೂ.ಹಣವನ್ನು ಪರಿಹಾರ ರೂಪದಲ್ಲಿ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular