ವಿಜಯನಗರ: ಹೊಸಪೇಟೆಯಲ್ಲಿ ಕಳೆದೊಂದು ತಿಂಗಳಿಂದ ಕಾಟ ಕೊಡುತ್ತಿದ್ದ
ಹುಚ್ಚು ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಹೊಸಪೇಟೆಯ ಪಾರ್ವತಿ ನಗರ, ಆಕಾಶವಾಣಿ ಪ್ರದೇಶ ಸೇರಿದಂತೆ ನಾನಾ ಕಡೆ ಹಲವರಿಗೆ ಕೆಂಪು ಕೋತಿ ದಾಳಿ ಮಾಡಿ, ಗಾಯಗೊಳಿಸಿತ್ತು. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು.
ಅರಣ್ಯ ಇಲಾಖೆ ಸಿಬ್ಬಂದಿಗೂ ಕಚ್ಚಿ ಗಾಯಗೊಳಿಸಿದ್ದ ಕೋತಿಯನ್ನು ಇಂದು ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.