Monday, April 7, 2025
Google search engine

Homeರಾಜ್ಯಸುದ್ದಿಜಾಲಅ.೧೭ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆಯ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಅ.೧೭ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆಯ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೧೭ರಂದು ವಿಜೃಂಭಣೆಯಿoದ ಮತ್ತು ಅರ್ಥಪೂರ್ಣವಾಗಿ ಕೆ.ಆರ್.ನಗರ ಪಟ್ಟಣದಲ್ಲಿ ಆಚರಿಸಲು ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಶಾಸಕ ಡಿ.ರವಿಶಂಕರ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿಯಿಂದ ವಾಲ್ಮೀಕಿಯವರ ಭಾವಚಿತ್ರವನ್ನು ಅಕೃಂತರಗೊoಡ ಬೆಳ್ಳಿ ರಥದಲ್ಲಿ ಮಂಗಳವಾದ್ಯ, ಕುಂಭಕಳಸ, ವಿವಿಧ ಕಲಾತಂಡಗಳೊoದಿಗೆ
ಮೆರವಣಿಗೆ ಬೆಳಗ್ಗೆ ೯.೩೦ಕ್ಕೆ ಆರಂಭವಾಗಲಿದ್ದು ಸಮಾಜದ ಬಂದುಗಳು ಸಕಾಲಕ್ಕೆ ಆಗಮಿಸಬೇಕು ಎಂದು ಕೋರಿದರು.

ಆನಂತರ ಪುರಸಭೆ ಬಯಲು ರಂಗ ಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಮಧ್ಯಾಹ್ನ ೨ ಗಂಟೆಯ ಒಳಗೆ ಮುಗಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದ ಶಾಸಕರು ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಬಂಧುಗಳು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ೮ ಮಂದಿಯನ್ನು ಜಯಂತಿ ಆಚರಣಾ ಸಮಿತಿ ಸದಸ್ಯರನ್ನಾಗಿ ಮಾಡಿಕೊಂಡು ವಾಲ್ಮೀಕಿ ಸಮುದಾಯ ಭವನದಲ್ಲಿ ಸಭೆ ನಡೆಸಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡು ನನ್ನ ಗಮನಕ್ಕೆ ತರಬೇಕು ಎಂದರು.

ಸಾಲಿಗ್ರಾಮ ತಾಲೂಕು ಅಧ್ಯಕ್ಷ ಸಿ.ಸಿ.ಮಹದೇವ್, ಕೆ.ಆರ್.ನಗರ ತಾಲೂಕು ಅಧ್ಯಕ್ಷ ನರಸಿಂಹನಾಯಕ, ಶಿಕ್ಷಕರ ಸಂಘದ ನಿರ್ದೇಶಕ ಕೃಷ್ಣನಾಯಕ, ಶಿಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕ ದಾಸಪ್ಪ, ಹಂಪಾಪುರ ವಿಎಸ್‌ಎಸ್‌ಎನ್ ನಿರ್ದೇಶಕ ದೇವರಾಜು, ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ಮಾತನಾಡಿ ಜಯಂತಿ ಆಚರಣೆಗೆ ಸಲಹೆ ಸೂಚನೆ ನೀಡಿದರು.

ಸಭೆಯಲ್ಲಿ ಸಾಲಿಗ್ರಾಮ ತಾಲೂಕು ತಹಶೀಲ್ದಾರ್ ನರಗುಂದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಡಿಂಡಿಮಶoಕರ್, ಉಪಾಧ್ಯಕ್ಷ ಕೃಷ್ಣಯ್ಯ, ರೈತ ಮುಖಂಡರಾದ ಎಂ.ಜೆ.ಕುಮಾರ್, ಅಂಕನಹಳ್ಳಿತಿಮ್ಮಪ್ಪ, ಆದಿ ಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್, ಎ.ಟಿ.ಶಿವಣ್ಣ, ದಿನೇಶ್, ಬೆಟ್ಟನಾಯಕ, ಕೃಷ್ಣನಾಯಕ,
ನಾಗರಾಜನಾಯಕ, ರಾಜನಾಯಕ, ಬಿ.ಹೆಚ್.ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್,
ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್ , ಇಓ ಕುಲದೀಪ್, ಬಿಇಓ ಕೃಷ್ಣಪ್ಪ , ತಾಲೂಕು ಆರೋಗ್ಯಧಿಕಾರಿ ಡಾ.ನಟರಾಜು, ಎಇಇಗಳಾದ ಸುಮೀತಾ, ಎಡಿ ಮಲ್ಲಿಕಾರ್ಜುನ್, ಅರ್ಕೇಶ್ , ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular