ಹುಬ್ಬಳ್ಳಿ, ಡಿ, 22: ಹುಬ್ಬಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಮರ್ಯಾದಾ ಹತ್ಯೆ ಪ್ರಕರಣದಲ್ಲಿ, ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾಳ ಪತಿ ವಿವೇಕಾನಂದ ತೀವ್ರ ದುಃಖದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ತಮ್ಮ ಪತ್ನಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದು, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಮಾನ್ಯಾ ಮತ್ತು ವಿವೇಕ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.
ಮಾನ್ಯಾಳ ತಂದೆ ಹಿಂದೆ ಮುಸ್ಲಿಂ ಹುಡುಗಿಯೊಬ್ಬರನ್ನು ಪ್ರೀತಿಸಿದ್ದರು. ಆವಾಗ ಅವರಿಗೆ ಜಾತಿ ಮುಖ್ಯವಾಗಿರಲಿಲ್ಲ. ಆದರೆ, ಈಗ ತಮ್ಮ ಮಗಳು ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದು ತಪ್ಪಾಯ್ತಾ ಎಂದು ವಿವೇಕಾನಂದ ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಬಾರಿ ಮಧ್ಯಪ್ರವೇಶಿಸಿ, ಎಚ್ಚರಿಕೆ ನೀಡಿದ್ದರೂ ಕೊಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ, ಮಾನ್ಯಾ ಶವವನ್ನು ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.



