ಕೆ.ಆರ್.ನಗರ: ವಿಶ್ವಕರ್ಮ ಸಮಾಜದವತಿಯಿಂದ ನೂತನ ಶಾಸಕರಾದ ಡಿ.ರವಿಶಂಕರ್ ಅವರಿಗೆ ಅಭಿನಂದನೆ ಹಾಗೂ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ ೨ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ.
ಪಟ್ಟಣದ ಶ್ರೀಕೃಷ್ಣ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಡಿ. ರವಿಶಂಕರ್ ಅವರಿಗೆ ಅಭಿನಂದನೆ ಹಾಗೂ ವಿಶ್ವಕರ್ಮ ಸಮಾಜದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯ ೨೦೨೩ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು ವಿಶ್ವಕರ್ಮ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.