ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ ಆರೋಪಿತನನ್ನು ಬಂಧಿಸಲಾಗಿದೆ. ಬಂಧಿತನನ್ನು ಸುನೀಲ್ ಎಂದು ಗುರುತಿಸಲಾಗಿದೆ.
ದಿನಾಂಕ: 28-12-2024 ರಂದು ಮದ್ಯಾಹ್ನ ಮಂಗಳೂರು ನಗರದ ನಾಗುರಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿಯನ್ನು ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್ ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300/- ನಗದು ಹಣ ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತ ಮತ್ತು ಸೊತ್ತು ಪತ್ತೆಯ ಬಗ್ಗೆ ತಂಡವನ್ನು ರಚಿಸಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿತನನ್ನು ದಸ್ತಗಿರಿ ಮಾಡಿ ಆತನಿಂದ ಕಳವು ಮಾಡಿದ ರೂ. 17,500/- ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ಸೇರಿಸಿ ಒಟ್ಟು ರೂ. 1,20,000/- ಬೆಲೆ ಬಾಳುವ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ..