Saturday, April 19, 2025
Google search engine

Homeಅಪರಾಧತರಗತಿಯಲ್ಲಿ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ತರಗತಿಯಲ್ಲಿ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮೈಸೂರು: ತರಗತಿಯಲ್ಲಿ ವಿದ್ಯಾರ್ಥಿಗಳಿಬ್ಬರ ನಡುವೆ ನಡೆದ ಗಲಾಟೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಲೆಯಾಗಿರುವ ದುರ್ಘಟನೆ ಮೈಸೂರಿನ ಜೆ.ಪಿ.ನಗರದ ಖಾಸಗಿ ಕಾಲೇಜು ಒಂದರಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೈಸೂರಿನ ಮಹದೇವಪುರ ನಿವಾಸಿ ಸತೀಶ್ ಅವರ ಮಗ ಕೃಷ್ಣ (16) ಕೊಲೆಯಾದ ವಿದ್ಯಾರ್ಥಿ.

ಜೆ.ಪಿ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಭಿಷೇಕ್ ಮತ್ತು ಕೃಷ್ಣ ನಡುವೆ ಕ್ಷುಲ್ಲಕ ವಿಷಯಕ್ಕೆ ಜಗಳ ಆರಂಭವಾಗಿ, ಮಾರಮಾರಿ ನಡೆದಿದೆ.

ಜಗಳ ಬಿಡಿಸುವಷ್ಟರಲ್ಲಿ ನೋಡ-ನೋಡುತ್ತಿದ್ದಂತೆ ಅಭಿಷೇಕ್ ಕೃಷ್ಣನ ಕಪಾಳಕ್ಕೆ ಮುಷ್ಟಿಯಿಂದ ಬಲವಾಗಿ ಹೊಡೆದ ತಕ್ಷಣ ಪ್ರಜ್ಞಾಹೀನನಾಗಿ ಬಿದ್ದ ಕೃಷ್ಣನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ, ಆತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕೃಷ್ಣನ ದೇಹವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.

RELATED ARTICLES
- Advertisment -
Google search engine

Most Popular