Friday, January 16, 2026
Google search engine

Homeರಾಜ್ಯಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರಿ ಅನಾಹುತ

ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದ ದಿನವಾದ ನಿನ್ನೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯಲ್ಲಿ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿದ್ದು ಕೆಲಕಾಲ ಆತಂಕ ಮನೆ ಮಾಡಿತ್ತು ಎನ್ನಲಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯದ ಮುಂದೆ ಆಯೋಜಕರು ಹುಲ್ಲು, ಹೂವು ಹಾಗೂ ಬ್ಯಾನರ್‌ಗಳಿಂದ ಸುಂದರವಾಗಿ ಸಿಂಗಾರ ಮಾಡಿದ್ದರು. ರಾತ್ರಿ 7 ಗಂಟೆ ಸುಮಾರಿಗೆ ಪಟಾಕಿ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ಕಿಡಿ ಸಿಂಗಾರಗೊಂಡಿದ್ದ ತೋರಣಕ್ಕೆ ತಾಕಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.

ಈ ವೇಳೆ ದೇವಾಲಯದ ಮುಂದೆ ಸಚಿವ ದಿನೇಶ್ ಗುಂಡೂರಾವ್ ಅವರ ಬ್ಯಾನರ್ ಕೂಡ ಅಳವಡಿಸಲಾಗಿತ್ತು. ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಹಾಗೂ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದರು. ಸ್ಥಳೀಯರ ಸಕಾಲಿಕ ಕ್ರಮದಿಂದಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಮಟ್ಟದ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ.

RELATED ARTICLES
- Advertisment -
Google search engine

Most Popular