ಕಾರವಾರ : ಬಿಜೆಪಿಯ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಬೆಂಕಿ ಅವಘಡ ಸಂಭವಿಸಿದ್ದು, ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ.
ಅನಂತ್ ಕುಮಾರ್ ನಿವಾಸಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.