ಸಾಗರ: ಸಾಗರದ ಎಲ್‌ಬಿ ಕಾಲೇಜು ಸಮೀಪ ತಾಂತ್ರಿಕ ತೊಂದರೆಯಿಂದ ಕೆಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಟ್ಕಳ ಟು ಬೆಂಗಳೂರು ತೆರಳುತ್ತಿದ್ದ ಬಸ್ ಇದಾಗಿದ್ದು, ಸಾಗರದ ಎಲ್ ಬಿ ಕಾಲೇಜು ಬಳಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ೧ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.