ಬೆಂಗಳೂರು : ಕೇರಳದಲ್ಲಿ ಬರೋಬ್ಬರಿ ೨೫ ಲಕ್ಷ ರೂ. ಮೌಲ್ಯದ ೨೦೦೦ ನಕಲಿ ನೋಟು ಮುದ್ರಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಎಕ್ಸ್‌ಚೇಂಜ್ ಮಾಡಿಕೊಳ್ಳುತ್ತಿದ್ದ, ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬರೋಬ್ಬರಿ ೨೫ ಲಕ್ಷ ರೂ. ಮೌಲ್ಯದ ೨೦೦೦ ನೋಟುಗಳನ್ನು ತಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಎಕ್ಸ್‌ಚೇಂಜ್ ಮಾಡಿಕೊಳ್ಳುವಾಗ ನಕಲಿ ನೋಟು ಮುದ್ರಿಸಿ ತಂದಿರುವುದು ಪತ್ತೆಯಾಗಿದೆ.ನಕಲಿ ನೋಟು ಮುದ್ರಿಸಿ ಎಕ್ಸ್ ಚೇಂಜ್ ಯತ್ನ ಮಾಡಲು ಮುಂದಾಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹಲಸೂರು ಗೇಟ್ ಪೊಲೀಸರಿಂದ ಅಫ್ಜಲ್, ಅನ್ವರ್, ಪ್ರಸಿದ್ಧ್ ಸೇರಿ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಪೊಲೀಸರೆ ಬೆಚ್ಚಿ ಬಿದ್ದಿದ್ದಾರೆ. ಪ್ರಮುಖ ಆರೋಪಿ ಅಫ್ಜಲ್, ಕೇರಳದಿಂದ ಬೆಂಗಳೂರು ನಗರಕ್ಕೆ ೨೫ ಲಕ್ಷ ರೂ. ಹಣ ತಂದಿದ್ದನು. ಎಲ್ಲ ನೋಟುಗಳು ೨,೦೦೦ ರೂ. ಮೌಲ್ಯದ ನೋಟುಗಳಾಗಿದ್ದು, ಅವುಗಳನ್ನು ಬೆಂಗಳೂರಿನಲ್ಲಿರುವ ಆರ್‌ಬಿಐ ಶಾಖಾ ಕಚೇರಿಯಲ್ಲಿ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮುಂದಾಗಿದ್ದರು.
ಈ ಮಾಹಿತಿಯನ್ನು ಆಧರಿಸಿ ಕಾಸರಗೋಡಿಗೆ ತೆರಳಿದ ಪೊಲೀಸರು ನಕಲಿ ನೋಟು ಮುದ್ರಣ ಮಾಡುತ್ತಿದ್ದ ಉಳಿದ ಮೂವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬಂಧಿತರಿಂದ ಒಟ್ಟು ೫೪ ಲಕ್ಷ ರೂ. ನಕಲಿ ನೋಟು, ಪ್ರಿಂಟಿಂಗ್ ಮೆಷಿನ್, ಪೇಪರ್, ಕಚ್ಚಾವಸ್ತುಗಳು ವಶಕ್ಕೆ ಪಡೆಯಲಾಗಿದೆ.