ಹನೂರು: ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.
ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.