ರಾಮನಗರ: ಮಾಗಡಿ ತಾಲೂಕಿನ ಸಾತನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಅವರು ಸ್ವಾಗತಿಸಿದರು.
ಮಾಗಡಿ ತಾಲ್ಲೂಕಿನ ತಹಶೀಲ್ದಾರರಾದ ಸುರೇಂದ್ರ ಮೂರ್ತಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು ಹಾಗೂ ಸಮುದಾಯದ ಮುಖಂಡರು, ಸಂಘ-ಸಂಸ್ಥೆಯ ಪದಾಧಿಕಾರಿಗಳಿದ್ದರು.
ನಂತರ ಸಂವಿಧಾನ ಜಾಗೃತಿ ಜಾಥಾವು ಆಗಲಕೋಟೆ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿತು. ಇದೇ ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ವಾಚಿಸಿದರು.