Saturday, April 12, 2025
Google search engine

Homeರಾಜ್ಯಸುದ್ದಿಜಾಲಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಗುರುವಾರ (ಆಗಸ್ಟ್ 1) ರಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಜೆ ಘೋಷಣೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಜಿಲ್ಲೆಯಾದ್ಯಂತ ಗುರುವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಕ್ರಮ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪಿಯು ಕಾಲೇಜಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular