ಮಂಗಳೂರು(ದಕ್ಷಿಣ ಕನ್ನಡ): ನಿರುದ್ಯೋಗ ಸಮಸ್ಯೆ, ಶಾಲಾ ಕಾಲೇಜುಗಳ ಶುಲ್ಕ ಹೆಚ್ಚಳ, ಅಸಮರ್ಪಕ ಹಾಸ್ಟೆಲ್ ಸೌಲಭ್ಯ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಯಂಗ್ ಇಂಡಿಯಾ ಸಂಘಟನೆ ವತಿಯಿಂದ ಫೆ.28ರಂದು ಹೊಸದಿಲ್ಲಿಯಲ್ಲಿ ಬೃಹತ್ ರ್ಯಾಲಿ ನಡೆಯಲಿದೆ’ ಎಂದು ಸಂಘಟನೆಯ ಸಂಚಾಲಕಿ ಲೇಖಾ ಅಡವಿ ತಿಳಿಸಿದ್ದಾರೆ.
ಅವರು ಮಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಯಂಗ್ ಇಂಡಿಯಾ ವತಿಯಿಂದ ದೇಶದ ಹಲವು ವಿವಿಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಆ ಸಮೀಕ್ಷೆಯಲ್ಲಿ ವಿದ್ಯಾರ್ಥಿ, ಯುವಜನರ ಹಲವು ಸಮಸ್ಯೆಗಳನ್ನು ಗುರುತಿಸಿ ಕೇಂದ್ರ ಸರಕಾರದ ವಿರುದ್ಧ ಅತೃಪ್ತಿಗೊಂಡಿದ್ದಾರೆ’ ಎಂದು ವಿವರಿಸಿದರು.