Friday, April 4, 2025
Google search engine

Homeಕಾಡು-ಮೇಡುಬಾಚಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ

ಬಾಚಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ

ಗುಂಡ್ಲುಪೇಟೆ: ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯ ಬಾಚಹಳ್ಳಿ ಸಮೀಪದಲ್ಲಿ ನಡೆದಿದೆ. ತಾಲೂಕಿನ ಬಾಚಹಳ್ಳಿ ಗ್ರಾಮದ ಮುದ್ದಪ್ಪ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು ೫ ರಿಂದ ೬ ವರ್ಷ ವಯಸ್ಸಿನ ಚಿರತೆ ಸೆರೆಯಾಗಿದೆ.

ಕಳೆದ ನಾಲ್ಕೈದು ದಿನಗಳ ಹಿಂದೆ ಬೊಮ್ಮಲಾಪುರ ಗ್ರಾಮದ ಗೋಪಾಲನಾಯಕ ಎಂಬುವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕುರಿ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಜೊತೆಗೆ ಬಾಚಹಳ್ಳಿ, ಅಂಕಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಜನರು ಹಾಗೂ ರೈತರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರೈತರು ಮತ್ತು ಸ್ಥಳೀಯರ ಒತ್ತಾಯದ ಮೇರೆಗೆ ಕುಂದಕೆರೆ ವಲಯದ ಆರೆಫ್ ಓ ನವೀನ ಕುಮಾರ್ ನೇತೃತ್ವದಲ್ಲಿ ಬೋನು ಇರಿಸಲಾಗಿತ್ತು. ಇದೀಗ ಆ ಬೋನಿಗೆ ಚಿರತೆ ಬಿದ್ದಿದೆ.

ಬೋನಿಗೆ ಚಿರತೆ ಬಿದ್ದ ಮಾಹಿತಿ ಅರಿತ ಅರಣ್ಯ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆರೆಯಾದ ಚಿರತೆಯನ್ನು ಬಂಡೀಪುರದ ಮೂಲೆಹೊಳೆ ಅರಣ್ಯ ಪ್ರದೇಶದ ಒಳಗೆ ಬಿಡಲಾಯಿತು ಎಂದು ಕುಂದಕೆರೆ ವಲಯದ ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ವೇಳೆ ಕುಂದಕೆರೆ ವಲಯದ ಆರೆಫ್‌ಓ ನವೀನ್ ಕುಮಾರ್, ಅರಣ್ಯಾಧಿಕಾರಿ ಮನೋಹರ್, ಮಹೇಶ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

RELATED ARTICLES
- Advertisment -
Google search engine

Most Popular