Sunday, April 20, 2025
Google search engine

Homeಅಪರಾಧದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಸಾವು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಮಂಗಳೂರು (ದಕ್ಷಿಣ ಕನ್ನಡ): ಸ್ಕೂಟರ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ; ಪ್ರಸಕ್ತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ ಅಶ್ರಫ್, ಮೃತಪಟ್ಟ ಯುವಕ. ಇವರು ಸ್ನೇಹಿತನಿಗೆ ಸಹಾಯ ಮಾಡಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಶ್ರಫ್ ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದರು. ತನ್ವೀರ್ ರನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿಯನ್ನು ಅದರ ಚಾಲಕ ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular