ಚಾಮರಾಜನಗರ: ಚಾಮರಾಜನಗರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾಗಸುಂದರ ಉಪಾಧ್ಯಕ್ಷರಾಗಿ ಎ.ಎಂ. ಮಣಿ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಅಧ್ಯಕ್ಷರಾಗಿದ್ದ ಸೋಮಶಂಕರ ಮೂರ್ತಿ, ಉಪಾಧ್ಯಕ್ಷ ಇಂದ್ರೇಶಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ಘೋಷಣೆಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಾಗಸುಂದರ ಉಪಾಧ್ಯಕ್ಷ ಸ್ಥಾನಕ್ಕೆ ಎ.ಎಂ. ಮಣಿ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ದಿ ಅಧಿಕಾರಿ ತ್ಯಾಗರಾಜು ಅವರು ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಸಂಘದ ಬಲವರ್ಧನೆ ಹಾಗೂ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲು ಬದ್ದ : ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಅಮಚವಾಡಿ ನಾಗಸುಂದರ ಅಧಿಕಾರ ವಹಿಸಿಕೊಂಡು ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಆಬಾರಿಯಾಗಿದ್ದೇನೆ. ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ದಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಎ.ಎಸ್. ತೀರ್ಥೇಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಅಮಚವಾಡಿ ಗ್ರಾ.ಪಂ. ಅಧ್ಯಕ್ಷೆ ತೇಜಸ್ವಿನಿ,ಗ್ರಾ.ಪಂ. ಸದಸ್ಯರಾದ ಮಹೇಶ್, ನಂಜುಂಡಸ್ವಾಮಿ, ಚನ್ನಪ್ಪನಪುರ ಪ್ರಸಾದ್, ಯರಗನಹಳ್ಳಿ ಬಸವಣ್ಣ, ಮುಖಂಡರಾದ ಎನ್.ಆರ್. ಪುರುಷೋತ್ತಮ್, ತೊರವಳ್ಳಿ ಕುಮಾರ್ ಮೊದಲಾಧವರು ಅಭಿನಂದಿಸಿದರು.