ಗುಂಡ್ಲುಪೇಟೆ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚೌಡಹಳ್ಳಿ ಗ್ರಾಮದ ನಾಗಯ್ಯ(52) ಮೃತ ವ್ಯಕ್ತಿ. ಶನಿವಾರ ರಾತ್ರಿ ಗಂಡ ಹೆಂಡತಿ ನಡುವೆ ಗಲಾಟೆ ನಡೆದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ಮಾಹಿತಿ ಅರಿತ ಗುಂಡ್ಲುಪೇಟೆ ಪೆÇಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ, ಶವವನ್ನು ಮರದಿಂದ ಕೆಳಗಿಳಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಮೃತದೇಹ ಹಸ್ತಾಂತರ ಮಾಡಿದ್ದಾರೆ. ಇನ್ನೂ ಈ ಕುರಿತು ಗುಂಡ್ಲುಪೇಟೆ ಪೆÇಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.