Monday, April 21, 2025
Google search engine

Homeಸಿನಿಮಾಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಮೈಸೂರು: ನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ಇಂದು ಸೋಮವಾರ ಮಕ್ಕಳ ದಿನಾಚರಣೆ ಹಾಗೂ ರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ವಿವಿಧ ವೇಷಧಾರಿಗಳಾಗಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಅಧ್ಯಕ್ಷ ಡಾ. ಶಾಜಿಯಾ ಅವರು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಕಾರ್ಯದರ್ಶಿ ಗಳಾದ ಶ್ರೀ ಅಲ್ತಾಫ್‌ಅಹ್ಮದ್‌ ಅವರು ಮಕ್ಕಳು ಮಾತೃಭಾಷೆಯನ್ನುಕಲಿಯಬೇಕಾದ್ದು ಬಹಳ ಅತ್ಯವಶ್ಯಕಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಮೂರ್ತಿ ಎಸ್, ಮುಖೋಪಾಧ್ಯ್ಯಾಯ ಲತಾಆನಂದ್, ಆಡಳಿತಾಧಿಕಾರಿಗಳಾದ ಸ್ಟ್ಯಾನ್ಲಿ ಪಾಲ್, ಪೋಷಕರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular