Sunday, April 20, 2025
Google search engine

Homeರಾಜ್ಯಮೈಸೂರು ಅರಮನೆ ಆವರಣದಲ್ಲಿ ಅರ್ಥಪೂರ್ಣ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು ಅರಮನೆ ಆವರಣದಲ್ಲಿ ಅರ್ಥಪೂರ್ಣ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮೈಸೂರು: ಮೈಸೂರು ಅರಮನೆ ಆವರಣದಲ್ಲಿ  ಇಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಏರ್ಪ ಡಿಸಿದ್ಧ ಕಾರ್ಯಕ್ರಮದಲ್ಲಿ ಅರಮನೆ ದಕ್ಷಿಣ ದ್ವಾರದಲ್ಲಿ ಪ್ರವಾಸಿಗರನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಿ ಬಾನೋತ್  ಅವರು ಗುಲಾಬಿ ಹೂ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಬೆಳಗ್ಗೆ 10 ರಿಂದ ನಾನಾ ಕಲಾತಂಡಗಳೊಂದಿಗೆ ಪ್ರವಾಸಿಗರನ್ನು ಸ್ವಾಗತಿಸಲಾಯಿತು. ಅವರಿಗೆ ಗುಲಾಬಿ ಹೂವು ಹಾಗೂ ಮೈಸೂರು ಪಾಕ್‌ ಹಾಗೂ ಪ್ರವಾಸಿ ಗೈಡ್  ವಿತರಿಸಲಾಯಿತು. ವಿದೇಶಿಗರು ಸೇರಿದಂತೆ ಸುಮಾರು 50 ಪ್ರವಾಸರಿಗರು ಈ ವೇಳೆ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರು ಮೈಸೂರು ವಿಶ್ವ ಭೂಪಟದಲ್ಲಿ ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿಕೊಂಡಿದ್ದು ಮೈಸೂರು ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳಿವೆ ಎಂದು ಅವರು ತಿಳಿಸಿದರು.

ಯುನೆಸ್ಕೋ ಪಾರಂಪರಿಕ ತಾಣವಾಗಿ ಸೋಮನಾಥಪುರ ದೇವಸ್ಥಾನವನ್ನು ಅಂಗೀಕರಿಸಿದೆ. ಮೈಸೂರು ಪ್ರವಾಸೋದ್ಯಮ ಬಗ್ಗೆ ಪ್ರವಾಸಿಗರಿಗೆ ಇನ್ನೂ ಹೆಚ್ಚು ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಮುಂದಾಲೋಚನೆಯಿಂದ ಮೈಸೂರು ರಾಜರು ದೊಡ್ಡ ರಸ್ತೆಗಳು ನಿರ್ಮಾಣ ಮಾಡಿದ್ದಾರೆ. ಮೈಸೂರಿನಲ್ಲಿ  ಪ್ರವಾಸೋದ್ಯಮಕ್ಕೆ  ಉತ್ತೇಜನಕಾರಿಯಿಂದ  ದೇಶದ ಅಭಿವೃದ್ಧಿ ಪ್ರವಾಸೋದ್ಯಮ ಕ್ಷೇತ್ರವಾಗಿ ಮಾಡಬಹುದು ಎಂದು ಅವರು ತಿಳಿಸಿದರು.

ಪೂಜ್ಯ ಮೇಯರ್ ಶಿವಕುಮಾರ್ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,  ಪ್ರವಾಸೋದ್ಯಮ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾಮೈಸೂರು ಹೋಟೆಲ್ ಅಸೋಸಿ ಯೇಷನ್ ಅಧ್ಯಕ್ಷ ಸಿ.ನಾರಾಯಣಗೌಡ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, , ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular