Tuesday, April 22, 2025
Google search engine

Homeಸ್ಥಳೀಯದೇಶಕ್ಕೆ ಮಾದರಿ ಯಶಸ್ವಿ ಕಾಂಗ್ರೆಸ್ ಸರ್ಕಾರ : ಕೆ. ಮರೀಗೌಡ

ದೇಶಕ್ಕೆ ಮಾದರಿ ಯಶಸ್ವಿ ಕಾಂಗ್ರೆಸ್ ಸರ್ಕಾರ : ಕೆ. ಮರೀಗೌಡ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶಕ್ಕೆ ಮಾದರಿ ಯಶಸ್ವಿ ಸರ್ಕಾರವಾಗಿದೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರಿಗೆ ಯಶಸ್ವಿಯಾಗಿ ೧ ವರ್ಷ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸಿದ್ದರಾಮಯ್ಯನವರು ಚುನಾವಣಾ ಪೂರ್ವ ಜನರಿಗೆ ಭರವಸೆ ನೀಡಿದ್ದು ೫ ಗ್ಯಾರಂಟಿಗಳನ್ನು ನಂಬಿದ್ದ ಜನರು ೧೩೫ ಕಾಂಗ್ರೆಸ್ ಶಾಸಕರು ಗೆಲ್ಲಲು ಕಾರಣರಾಗಿದ್ದಾರೆ. ಸರ್ಕಾರ ಬಂದ ೯ ತಿಂಗಳಲ್ಲಿಯೇ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ೪.೫ ಕೋಟಿ ಬಡ ಕುಟುಂಬಗಳು ನೆಮ್ಮದಿಯಿಂದ ಬದುಕುವಂತೆ ಮಾಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಮಹಿಳೆಯರು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ೫ ವರ್ಷಗಳನ್ನು ಪೂರೈಸಲಿದೆ ಎಂದ ಅವರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೋಮುಭಾವನೆ ಬಿತ್ತಿ ಹಿಂದು, ಮುಸ್ಲಿಂ ಎಂದು ಜಾತಿಯ ವಿಷಬೀಜ ಬಿತ್ತುವ ಬಿ.ಜೆ.ಪಿ. ಪಕ್ಷದ ಆಟ ರಾಜ್ಯದಲ್ಲಿ ನಡೆಯುವುದಿಲ್ಲ.

ರಾಜ್ಯದ ಅಭಿವೃದ್ಧಿಯ ಜೊತೆಗೆ ೫ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಗೂ ಸಲ್ಲಬೇಕು ಎಂದರು.

RELATED ARTICLES
- Advertisment -
Google search engine

Most Popular