Friday, April 11, 2025
Google search engine

HomeUncategorizedರಾಷ್ಟ್ರೀಯಚಲಿಸುತ್ತಿದ್ದ ಬಸ್'ಗೆ ಹೊತ್ತಿಕೊಂಡ ಬೆಂಕಿ: 26 ಮಂದಿ ದುರ್ಮರಣ, 7 ಪ್ರಯಾಣಿಕರಿಗೆ ಗಾಯ

ಚಲಿಸುತ್ತಿದ್ದ ಬಸ್’ಗೆ ಹೊತ್ತಿಕೊಂಡ ಬೆಂಕಿ: 26 ಮಂದಿ ದುರ್ಮರಣ, 7 ಪ್ರಯಾಣಿಕರಿಗೆ ಗಾಯ

ಮುಂಬೈ: ಚಲಿಸುತ್ತಿದ್ದ ಬಸ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ಇಂದು ನಡೆದಿದೆ

ಘಟನೆಯಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ ​ಗೆ ಸೇರಿದ್ದಾಗಿದ್ದು,  ಬಸ್‌ ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್’ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನುಳಿದ 25  ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಇನ್ನು ಬಸ್​ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ 8 ಮಂದಿಯ ಪೈಕಿ ಇದೀಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ ​ನ ಇಂಜಿನ್​ ನಲ್ಲಿ ಸ್ಪಾರ್ಕ್​ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಘಟನೆ ಕುರಿತು ಬುಲ್ಧಾನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular