Friday, April 18, 2025
Google search engine

Homeರಾಜ್ಯಸುದ್ದಿಜಾಲವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ತಾಲೂಕು ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ತಾಲೂಕು ಕಚೇರಿ ಬಳಿ ಶಾಂತಿಯುತ ಪ್ರತಿಭಟನೆ

ವರದಿ: ಸತೀಶ್ ಆರಾಧ್ಯ

ಪಿರಿಯಾಪಟ್ಟಣ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್ ನವೀನ್ ರಾವ್ ಅವರು ಮಾತನಾಡಿ ಕೇಂದ್ರ ಸಂಘ ವತಿಯಿಂದ ಸೆ.22 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ ಚಿತ್ರದುರ್ಗದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ರಾಜ್ಯದ 31 ಜಿಲ್ಲೆಯ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಕೆಲಸ ನಿರ್ವಹಿಸಲು ಬೇಕಿರುವ ಅಗತ್ಯ ಪರಿಕರಗಳನ್ನು ನೀಡದೆ ಕೆಲಸದ ಒತ್ತಡ ನೀಡುತ್ತಿರುವ ಸಮಸ್ಯೆ ಪರಿಹಾರ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸೇರಿ ಹಲವು ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಇಲ್ಲವಾದಲ್ಲಿ ಬೇಡಿಕೆಗಳು ಈಡೇರುವವರೆಗೆ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ ಲೇಖನಿ ಸ್ಥಗಿತಗೊಳಿಸುವ ಮೂಲಕ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ಆರಂಭಿಸಿದ್ದೇವೆ ಎಂದರು.

ಈ ಸಂದರ್ಭ ತಾಲೂಕಿನ ವಿವಿದೆಡೆಯ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular