Friday, April 4, 2025
Google search engine

Homeಅಪರಾಧಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಕತ್ತರಿಸಿದ ವ್ಯಕ್ತಿ

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಕತ್ತರಿಸಿದ ವ್ಯಕ್ತಿ

ಮುಂಬಯಿ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದರು.  ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.

ಬುಧವಾರ ಸಂಜೆ (ಜೂ.7 ರಂದು) ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್‌  ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.

“ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದೆ. ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.

ಈ ಸಂಬಂಧ ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular