ಹಾಸನ : ಕೆಲವೇ ದಿನಗಳಲ್ಲಿ ಹಸಮಣೆಯೇರಬೇಕಿದ್ದ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ಕಳೆದ ರಾತ್ರಿ ನಡೆದಿದೆ.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಸ್ಟೇಬಲ್, ಬಾಗೇಶಪುರ ಗ್ರಾಮದ ಹರೀಶ್.ವಿ (32) ಕೊಲೆಯಾದವರು. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ಇದೇ ತಿಂಗಳು 11 ರಂದು ಹರೀಶ್ ಆವರ ವಿವಾಹ ನಿಗದಿಯಾಗಿತ್ತು.
ತಮ್ಮ ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಸಂಬಂಧಿಕರನ್ನು ಆಹ್ವಾನಿಸಿ ರಾತ್ರಿ KA-13-W-7272 ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ದಾಳಿ ಮಾಡಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ, ಪರಿಶೀಲನೆ ನಡೆಸಿದ್ದು, ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.