Saturday, April 19, 2025
Google search engine

Homeಅಪರಾಧಬಿಳಿಗಿರಿರಂಗನ ಬೆಟ್ಟದ ಮೇಲಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

ಚಾಮರಾಜನಗರ : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬೆಟ್ಟದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಾದೇವ ನಾಯಕ ಎಂದು ಹೇಳಲಾಗುತ್ತಿದ್ದು, ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಮಹದೇವನಾಯಕ ಮೇ ೫ ರಂದು ನಾಪತ್ತೆಯಾಗಿದ್ದಾರೆ ಎಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜೂ.೬ ರಂದು ಬಿಳಿಗಿರಿರಂಗನಬೆಟ್ಟದ ಬಳಿ ಬೈಕ್ ಪತ್ತೆಯಾಗಿದೆ. ಬೆಟ್ಟದ ಕಡಿದಾದ ಜಾಗದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್ ಬಳಸಿ ಪತ್ತೆ ಮಾಡಲಾಗಿದೆ. ಡ್ರೋನ್ ಕ್ಯಾಮೆರಾದಲ್ಲಿ ಕಮರಿನ ನಡುವೆ ಶವ ಸಿಲುಕಿರುವುದು ಪತ್ತೆಯಾಗಿದೆ. ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular